alex Certify ಸಿಎಂ ಸ್ಥಾನಕ್ಕೆ ಯಾರ್ಯಾರು ಪ್ರಯತ್ನಿಸುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ; ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸ್ಥಾನಕ್ಕೆ ಯಾರ್ಯಾರು ಪ್ರಯತ್ನಿಸುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ; ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚ್ಹೆಯೇ ನಡೆದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನ ಮಾಡುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ. ನಮ್ಮ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದರು.

ಹೈಕಮಾಂಡ್ ನಿಂದ ಹಿಡಿದು ಎಲ್ಲರೂ ಸಿಎಂ ಸಿದ್ದರಾಮಯ್ಯ ಬೆನ್ನಗೆ ನಿಂತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಎಲ್ಲರೂ ನಾವು ಸಿಎಂ ದ್ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಸಿಎಂ ಬದವಾಣೆ ಎನ್ನುವುದು ಕೇವಲ ಊಹಾಪೋಹ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...