ಗ್ರಾಪಂ ಅಧ್ಯಕ್ಷರ ಸಹಿ ನಕಲು ಮಾಡಿ ಪಿಡಿಒ 27 ಲಕ್ಷ ರೂ. ವಂಚನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯಲ್ಲಿ ಕೆರೆ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಪಿಡಿಒ ಟಿ. ತಿಮ್ಮಪ್ಪ ನಿಯಮಭಾಹಿಯವಾಗಿ ದುರುಪಯೋಗಪಡಿಸಿಕೊಂಡು 27.51 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗ್ರಾಮ ಪಂಚಾಯಿತಿಯ ಹಾಲಿ ಪಿಡಿಒ ಈ ಬಗ್ಗೆ ವರದಿ ನೀಡಿದ್ದಾರೆ. 2022 -23ನೇ ಸಾಲಿನಲ್ಲಿ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 2.84 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿತ್ತು. ಆಗ ಬಿಳಿಚೋಡು ಗ್ರಾಪಂ ಪ್ರಭಾರ ಪಿಡಿಒ ಆಗಿದ್ದ ಪ್ರಸ್ತುತ ದೊಣ್ಣೆಹಳ್ಳಿ ಗ್ರಾಪಂ ಕಾರ್ಯದರ್ಶಿಯಾಗಿರುವ ಟಿ. ತಿಮ್ಮಪ್ಪ ಇದನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ ಬಗ್ಗೆ ದೂರು ದಾಖಲಾಗಿತ್ತು.

ಜಗಳೂರು ತಾಲೂಕು ಬಸವನಕೋಟೆ ಗ್ರಾಮ ಪಂಚಾಯಿತಿಯ 15ನೇ ಹಣಕಾಸು ಯೋಜನೆ ಅನುದಾನವನ್ನು ಅಧ್ಯಕ್ಷರ ಸಹಿಯನ್ನು ನಕಲು ಮಾಡಿರುವ ತಿಮ್ಮಣ್ಣ ಅವರು ಗುತ್ತಿಗೆದಾರರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ದೂರಲಾಗಿತ್ತು. ಪರಿಶೀಲನೆ ನಡೆಸಿದಾಗ 2024 -25 ನೇ ಸಾಲಿಗೆ 15ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯಿತಿಗೆ ಬಿಡುಗಡೆಯಾದ ಅನುದಾನದಲ್ಲಿ ಒಟ್ಟು 24,67,000 ರೂ.ಗಳನ್ನು ಚೆಕ್ ಮೂಲಕ ವಿವಿಧ ಸಂಸ್ಥೆಗಳು ಮತ್ತು ಗುತ್ತಿಗೆದಾರರಿಗೆ ಬಿಡುಗಡೆ ಮಾಡಿರುವುದು ಕಂಡು ಬಂದಿದೆ ಎಂದು ವರದಿ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read