alex Certify BREAKING : ಬೆಂಗಳೂರಿನ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಮತ್ತೆ 14 ಮಂದಿ ಪಾಕ್ ಪ್ರಜೆಗಳು ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಮತ್ತೆ 14 ಮಂದಿ ಪಾಕ್ ಪ್ರಜೆಗಳು ಅರೆಸ್ಟ್.!


ಬೆಂಗಳೂರು : ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಮತ್ತೆ 14 ಮಂದಿ ಪಾಕ್ ಪ್ರಜೆಗಳನ್ನು ಬಂದಿಸಿದ್ದಾರೆ.

ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದ 14 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಇದುವರೆಗೆ 22 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನೈ, ದೆಹಲಿ. ಹೈದರಾಬಾದ್ ಗೆ ತೆರಳಿದ ಪೊಲೀಸರ ತಂಡ ಅಕ್ರಮವಾಗಿ ಭಾರತದಲ್ಲಿ ನೆಲೆಯೂರಿದ್ದ ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಾಗಿ ಈಗಾಗಲೇ ಪೊಲೀಸರ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿತ್ತು.
ಕಳೆದ ವಾರ ಜಿಗಣಿ ಬಳಿ ನಾಲ್ವರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿತ್ತು. ಬಂಧಿತರನ್ನು ವಿಚಾರಣೆ ನಡೆಸಿದಾಗ ಒಟ್ಟು 15 ಮಂದಿ ಭಾರತಕ್ಕೆ ನುಸುಳಿರುವುದು ಬಯಲಾಗಿತ್ತು. ಕಳೆದ 3-4 ದಿನದ ಹಿಂದೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ರಾತ್ರಿ ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...