ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿ ಬಹಿರಂಗಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಈಗಾಗಲೇ ಅವರಿಗೆ ಬಿಜೆಪಿಯಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಎಫ್ಎಸ್ಎಲ್ ವರದಿ ಬರಲಿ. ವರದಿ ಬಂದ ಬಳಿಕ ಮುನಿರತ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.