HomeKarnatakaBREAKING: ಚಿಕ್ಕಮಗಳೂರು ಸೇರಿ ಹಲವೆಡೆ ಹಿಂಗಾರು ಮಳೆ ಆರ್ಭಟ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ,...

BREAKING: ಚಿಕ್ಕಮಗಳೂರು ಸೇರಿ ಹಲವೆಡೆ ಹಿಂಗಾರು ಮಳೆ ಆರ್ಭಟ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್ ಜಾಮ್

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಎನ್.ಆರ್. ಪುರ, ಚಿಕ್ಕಮಗಳೂರು ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಸತತ ಎರಡು ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಬಾಳೂರು, ಬನಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಅರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ರಸ್ತೆಯ ಮೇಲೆ ನದಿಯಂತೆ ಮಳೆಯ ನೀರು ಹರಿಯುತ್ತಿದೆ, ಚಾರ್ಮಾಡಿ ಘಾಟ್ ನಲ್ಲಿ ಮಳೆ, ಗುಡ್ಡ ಕುಸಿತದಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸವಾರರು ಪರದಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular