HomeKarnatakaALERT : ಪಡಿತರ ಚೀಟಿದಾರರ ಗಮನಕ್ಕೆ : ಇನ್ಮುಂದೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ...

ALERT : ಪಡಿತರ ಚೀಟಿದಾರರ ಗಮನಕ್ಕೆ : ಇನ್ಮುಂದೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.

ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಇಕೆವೈಸಿ ಮಾಡಿಸದಿದ್ದಲ್ಲಿ ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತದೆ. ಇಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ ಎಂದು ಪಡಿತರ ಚೀಟಿದಾರರ ಗಮನಕ್ಕೆ ತರಲಾಗಿದೆ.
ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚಿಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆರು ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರಚೀಟಿದಾರರೇ ಗಮನಿಸಿ

ಧಾರವಾಡ : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯಲ್ಲಿ 29,430 ಅಂತ್ಯೋದಯ ಹಾಗೂ 3,55,200 ಬಿಪಿಎಲ್ ಒಟ್ಟು 3,84,630 ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ.

ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಉಳಿದ ದಿನಗಳಂದು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವ ಹಾಗೂ ಎನ್ಎಫ್ಎಸ್ಎ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular