ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ.
ನಾವೀನ್ಯತೆ, ತಾರ್ಕಿಕ ಸಾಧನೆಗಳು (ಉದಾ: ಎರಡು ಅನುಕ್ರಮ ವರ್ಷಗಳಲ್ಲಿ ಗಣಿತಶಾಸ್ತçದಲ್ಲಿ ಮೊದಲನೇ ಸ್ಥಾನ) ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ವಯೋಮಿತಿ ಒಳಗಿರುವ ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ. 10,000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಷರತ್ತು
5 ರಿಂದ 18 ವರ್ಷ ವಯೋಮಿತಿ ಹೊಂದಿರಬೇಕು, ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿದ ಪತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪ್ರತಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು/ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.
ಅಂತರಾಷ್ಟಿçÃಯ, ರಾಷ್ಟಿçÃಯ ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಮಾಹಿತಿ. ಹಿಂದಿನ ವರ್ಷಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಅರ್ಜಿದಾರರು ಬಳ್ಳಾರಿ ಜಿಲ್ಲೆಯಲ್ಲಿ ನೆಲಸಿರಬೇಕು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು.
ಪ್ರಸ್ತಕ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅ.30 ರೊಳಗೆ ಇದೇ ಕಚೇರಿಗೆ ಸಲ್ಲಿಸಿಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ. ವೃತ್ತದ ಬಳಿಯ ದೇವಿನಗರದ ಸ್ತಿ ಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.