alex Certify BREAKING : ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್’ ಹಗರಣ : ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್’ ಹಗರಣ : ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ(SIT)  ರಚಿಸಲು ಸಂಪುಟ ಸಭೆ ( Karntaka Cabinet Meeting) ನಿರ್ಧರಿಸಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಮಾಜಿ ಸಚಿವ ಸುಧಾಕರ್ ಗೆ ಸಂಕಷ್ಟ ಎದುರಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಹಾಗೂ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿತ್ತು. ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ ಅಪಾದನೆ ಕುರಿತಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಎಸ್ ಐ ಟಿ ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...