HomeKarnatakaBREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ.

ಬೀರಪ್ಪ ಮುದನೂರ(30), ಶರಣಪ್ಪ ಪರಸನಹಳ್ಳಿ(28) ಅಪಘಾತದಲ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ಸ್ಥಳಕ್ಕೆ ಕೆಂಭಾವಿ ಠಾಣೆಯ ಪಿಎಸ್ಐ ಅಮೋಘ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular