ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಗ್ರಾಮ ಪಂಚಾಯಿತಿ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಾರೆ..

ಸಚಿವರ ಸಂಧಾನದ ನಂತರ ತಕ್ಷಣವೇ ಮುಷ್ಕರ ಎಂಬ ಹಿಂಪಡೆದು ಕಚೇರಿ ಕಾರ್ಯಗಳಲ್ಲಿ ತೊಡಗುವುದಾಗಿ ನೌಕರರ ಸಂಘದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ನೌಕರರ ಮಹಾ ಒಕ್ಕೂಟ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

ಸುಮಾರು ಮೂರು ಗಂಟೆ ನಡೆದ ಸಭೆಯಲ್ಲಿ 75 ಹೆಚ್ಚು ಬೇಡಿಕೆಗಳನ್ನು ಆಲಿಸಿದ ಸಚಿವರು ಕಾನೂನು ಚೌಕಟ್ಟಿನಲ್ಲಿ ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಲಾಗುವುದು. ಪಿಡಿಒಗಳಿಗೆ ಬಡ್ತಿ ಸೇರಿ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಹೇಳಿದ್ದಾರೆ.

ತಕ್ಷಣದಿಂದಲೇ ನಮಸ್ಕಾರ ಪಡೆದು ಕಚೇರಿ ಕಾರ್ಯಗಳಲ್ಲಿ ಭಾಗವಹಿಸುತ್ತೇವೆ. ನೀವು ನೀಡಿದ ಭರವಸೆಯಂತೆ ಬೇಡಿಕೆಗಳನ್ನು ಈಡೇರಿಸಬೇಕೆಂದು ನೌಕರರು ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read