ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ಸೇರಿ ಲಭ್ಯವಿದ್ದ ವಿವಿಧ ವೃತ್ತಿಪರ ಕೋರ್ಸ್ ಗಳ(ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್) ಹೊರತುಪಡಿಸಿ ಒಟ್ಟು 1,11,294 ಸೀಟುಗಳಲ್ಲಿ 85,259 ಸೀಟುಗಳು ಹಂಚಿಕೆಯಾಗಿದೆ ಎಂದು ತಿಳಿಸಿದ್ದಾರೆ.
26,036 ಸೀಟು ಇನ್ನೂ ಹಾಗೆಯೇ ಉಳಿದಿದ್ದು, ಇವುಗಳಲ್ಲಿ ಅತಿ ಹೆಚ್ಚು ಇಂಜಿನಿಯರಿಂಗ್ ಸೀಟುಗಳಾಗಿವೆ. ಇಂಜಿನಿಯರಿಂಗ್ ವಿಭಾಗದಲ್ಲಿ ಲಭ್ಯವಿದ್ದ 79,907 ಸೀಟುಗಳಲ್ಲಿ 66,254 ಸೀಟು ಹಂಚಿಕೆ ಮಾಡಲಾಗಿದೆ. ಮೆಕಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಹೆಚ್ಚಿನ ಸೀಟುಗಳು ಉಳಿದಿವೆ ಎಂದು ಮಾಹಿತಿ ನೀಡಿದ್ದಾರೆ.