BIG NEWS: ಹೀಗೆ ಮುಂದುವರೆದರೆ ರಾಜೀನಾಮೆ ಕೊಟ್ಟು ಹೊರಬರಲು ಹಿಂದೆ ಮುಂದೆ ನೋಡಲ್ಲ: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕನ ಕಿಡಿ

ಬೆಳಗಾವಿ: ಸರ್ಕಾರ ಹಾಗೂ ಸಚಿವರ ವಿರುದ್ಧವೇ ಕಂಗ್ರೆಸ್ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಸರ್ಕಾರ ಹಾಗೂ ಸಚಿವರು ಶಾಸಕರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಮಾತನಾಡಿದ ಶಾಸಕ ರಾಜು ಕಾಗೆ, ಸಚಿವರು ನಮ್ಮ ಮನವಿಯನ್ನು ಆಲಿಸುತ್ತಿಲ್ಲ. ಈ ಹಿಂದೆ ನಾನು ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದೆ ಎಂದಿದ್ದಾರೆ.

ಆಡಳಿತ ಪಕ್ಷದಲ್ಲಿ ನಮ್ಮ ಮನವಿಗೆ ಸ್ಪಂದನೆ ಸಿಗುತ್ತಿಲ್ಲ. ಸರ್ಕಾರ, ಸಚಿವರ್ಯಾರೂ ನಮ್ಮ ಮನವಿ ಕೇಳುತ್ತಿಲ್ಲ. ನಮ್ಮಲ್ಲಿ ಎಷ್ಟು ಸಂಪತ್ತು ಇದೆ ಎಂಬುದು ಮುಖ್ಯವಲ್ಲ. ಮೊದಲು ರೈತರನ್ನು ಬದುಕಿಸುವ ಕೆಲಸವಾಗಬೇಕು. ಈ ಸರ್ಕಾರದಲ್ಲಿ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ನಾನು ರಾಜೀನಾಮೆ ಕೊಟ್ಟು ಹೊರಬರಲು ಹಿಂದೆಮುಂದೆ ನೋಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ ಮನವಿಯನ್ನು ಯಾರೂ ಕೇಳಲ್ಲ. ಜನರಿಗೆ ನಾವು ಕೊಟ್ಟ ಭರವಸೆ ಈಡೇರಿಸಲು ಆಗುತ್ತಿಲ್ಲ. ಕಾಣದ ಕೈಗಳು ಕೆಲಸಕ್ಕೆ ಅಡ್ಡಿಯುಂಟು ಮಾಡುತ್ತಿವೆ ಎಂಬ ಶಂಕೆ ವ್ಯಕ್ತವಾಗಿತ್ತಿದೆ. ನಮಗೆ ಜನರಿಗೆ ಕೊಟ್ಟ ಭರವಸೆ ಇಡೇರಿಸುವುದು ಮುಖ್ಯ. ಅದೂ ಆಗುತ್ತಿಲ್ಲ. ಸರ್ಕಾರವೂ ಸ್ಪಂದಿಸುತ್ತಿಲ್ಲ ಅಂದಮೇಲೆ ನಾವ್ಯಾಕೆ ಶಾಸಕರಾಗಿ ಇರಬೇಕು? ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read