HomeKarnataka'ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ' : ಕನ್ನಡಪರ ಸಂಘಟನೆಗಳಿಗೆ DCM ಡಿಕೆಶಿ ಖಡಕ್ ವಾರ್ನಿಂಗ್.!

‘ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ’ : ಕನ್ನಡಪರ ಸಂಘಟನೆಗಳಿಗೆ DCM ಡಿಕೆಶಿ ಖಡಕ್ ವಾರ್ನಿಂಗ್.!

ಬೆಂಗಳೂರು : ನ.1 ರಂದು ಕಡ್ಡಾಯವಾಗಿ ಎಲ್ಲಾ ಕಂಪನಿ, ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬಾವುಟ ಹಾರಿಸದ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ, ಕನ್ನಡ ಪರ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯೋತ್ಸವ ಆಚರಣೆ ಮಾಡದೇ ಇರುವ ಸಂಸ್ಥೆಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ, ಕನ್ನಡ ಪರ ಸಂಘಟನೆಗಳು ಗಲಾಟೆ ಮಾಡಿ ಬೆದರಿಕೆ ಹಾಕಬಾರದು ಎಂದರು.

ಈ ಬಾರಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನವೆಂಬರ್ 1 ರಂದು ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular