alex Certify ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯಕ್ಕೆ ಯುಪಿಎ ಅವಧಿಗಿಂತ ದುಪ್ಪಟ್ಟು ಅನುದಾನವನ್ನು ಎನ್ ಡಿಎ ಸರ್ಕಾರ ನೀಡಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆ ನಿರ್ಧರಿಸುವುದು ಕೇಂದ್ರ ಸರ್ಕಾರವಲ್ಲ. ಹಣಕಾಸು ಆಯೋಗ. ಅದು ನಿಗದಿಪಡಿಸಿದಷ್ಟು ಹಣವನ್ನು ಕೇಂದ್ರ ನೀಡಿದೆ ಎಂದು ಸಮರ್ಥಿಸಿಕೊಂಡರು.

2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ, ಈಗ ತಗಾದೆ ತೆಗೆಯುತ್ತಿದೆ ಎಂದು ಕಿಡಿಕಾರಿದರು.

ಪ್ರತಿ ಐದು ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚಿಸುತ್ತಿದ್ದು, ಈಗ ಮತ್ತೊಮ್ಮೆ ರಚನೆ ನಡೆದಿದೆ. ಹೊಸ ಹಣಕಾಸು ಆಯೋಗದ ಮುಂದಾದರೂ ರಾಜ್ಯಕ್ಕೆ ಏನು ಬೇಕೆಂಬುದನ್ನು ಸರಿಯಾಗಿ ಮಂಡಿಸಿ ಎಂದು ಹೇಳಿದರು.

ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ 49,000 ಕೋಟಿ ಗ್ರ್ಯಾಂಟೆಡ್ ಅನುದಾನ ಬಂದಿದ್ದರೆ, ಎನ್ ಡಿಎ ಸರ್ಕಾರ 3 ಲಕ್ಷ ಕೋಟಿ ಕೊಟ್ಟಿದೆ. ಇನ್ನೂ ರಾಜ್ಯದ ಪಾಲಿನ ತೆರಿಗೆ ಬಾಬ್ತು ಯುಪಿಎ ಬರೀ 63,000 ಕೋಟಿ ಕೊಟ್ಟಿದ್ದರೆ, ತಮ್ಮ ಸರ್ಕಾರ. 3.25 ಲಕ್ಷ ಕೋಟಿ ತೆರಿಗೆ ಹಂಚಿಕೆ ಬಿಡುಗಡೆ ಮಾಡಿದೆ ಎಂದರು.

ರಾಜ್ಯಕ್ಕೆ ಏನಾದರೂ ಒಳ್ಳೆಯದಾದರೆ ತಮ್ಮಿಂದ ಆಯಿತು, ಕೆಟ್ಟದ್ದಾದರೆ ಬಿಜೆಪಿ ಮಾಡಿತು ಎಂಬ ವಾಕ್ಚಾಳಿ ಕಾಂಗ್ರೆಸ್ ಗೆ ರೂಢಿಗತವಾಗಿದೆ. ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲ ಅದೇ ನಮ್ಮ ಪುಣ್ಯ… ಎಂದು ಲೇವಡಿ ಮಾಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...