HomeIndiaBREAKING NEWS: ಹೊಂಡ ಅಗೆಯುವಾಗಲೇ ಅವಘಡ: ಮಣ್ಣು ಕುಸಿದು 5 ಕಾರ್ಮಿಕರು ಸಾವು

BREAKING NEWS: ಹೊಂಡ ಅಗೆಯುವಾಗಲೇ ಅವಘಡ: ಮಣ್ಣು ಕುಸಿದು 5 ಕಾರ್ಮಿಕರು ಸಾವು

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಪಟ್ಟಣದ ಬಳಿ ಶನಿವಾರ ನಡೆದ ದುರಂತ ಘಟನೆಯಲ್ಲಿ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಜಸಾಲ್‌ಪುರ ಗ್ರಾಮದಲ್ಲಿ ಕಾರ್ಮಿಕರು ಭೂಗತ ಟ್ಯಾಂಕ್‌ಗಾಗಿ ಹೊಂಡ ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ

ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಗ್ ವಘೇಲಾ ಅವರ ಪ್ರಕಾರ, ಮಣ್ಣು ಕುಸಿತದಲ್ಲಿ ಹಲವಾರು ಕಾರ್ಮಿಕರು ಸಮಾಧಿಯಾಗಿದ್ದಾರೆ. 5ದು ಶವಗಳನ್ನು ಹೊರತೆಗೆಯಲಾಗಿದೆ. ಮೂರರಿಂದ ನಾಲ್ಕು ಇತರ ಕಾರ್ಮಿಕರು ಸಿಕ್ಕಿಬಿದ್ದಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular