alex Certify ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಮುಂದಿನ ಐದಾರು ದಿನ ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಅಕ್ಟೋಬರ್ 13 ರಂದು ಹೆಚ್ಚಿನ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 18 ರವರೆಗೆ ಮಳೆಯಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...