ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ಇದು ನನಗೆ ಆಘಾತ ಮತ್ತು ತೀವ್ರ ದುಃಖವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಅವರ ಮಗ ಜೀಶನ್ ಸಿದ್ದಿಕ್, ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರೊಂದಿಗೆ ಇರುತ್ತೇವೆ. ಈ ಘೋರ ಅಪರಾಧ ಎಸಗಿದ ಅಪರಾಧಿಗಳನ್ನು ಬಂಧಿಸಲು ಈ ಘಟನೆಯನ್ನು ಸಂಪೂರ್ಣವಾಗಿ ತನಿಖೆ ಮಾಡಿ, ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ ಎಂದು ಡಿಸಿಎಂ ತಿಳಿಸಿದ್ದಾರೆ.