HomeKarnatakaBIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪ ಕೆರೆಕೋಡಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ನೆಲಮಂಗಲದ ಚಂದನ್ ಮೃತ ಯುವಕ. ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯದ ಯೋಗೇಶ್ ಗಂಭೀರವಗೈ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐವರು ಯುವಕರು ಕೂಡ ಬೆಂಗಳೂರಿನಲ್ಲಿ ನೆಲೆಸಿದ್ದರು. ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದರು. ಕುಂಸಿಯ ಕೆರೆಕೋಡಿ ಬಳಿ ಚಂದನ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಚಂದನ್ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular