ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದಂತೆ, ಗಾಝಾದಲ್ಲಿ ಭಾನುವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಮಕ್ಕಳು ಸೇರಿದಂತೆ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ.
ಅಲ್ ಅವ್ದಾ ಮತ್ತು ಅಲ್ ಅಕ್ಸಾ ಆಸ್ಪತ್ರೆಗಳ ಅಧಿಕಾರಿಗಳ ಪ್ರಕಾರ, ಗಾಜಾದ ನುಸೈರತ್ ನಿರಾಶ್ರಿತರ ಶಿಬಿರದ ಅಲ್ ಮುಫ್ತಿ ಶಾಲೆಯಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 22 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರಲ್ಲಿ ಒಂದು ಶಿಶುವೂ ಸೇರಿದೆ. ವೈದ್ಯಕೀಯ ತಂಡಗಳು ಮಗುವನ್ನು ಉಳಿಸಲು ಪದೇ ಪದೇ ಪ್ರಯತ್ನಿಸಿದರೂ ಆಸ್ಪತ್ರೆಗೆ ಬಂದ ಸ್ವಲ್ಪ ಸಮಯದ ನಂತರ ಮಗು ಸಾವನ್ನಪ್ಪಿತು. 5,000 ಕ್ಕೂ ಹೆಚ್ಚು ಸ್ಥಳಾಂತರಗೊಂಡ ಜನರು ಪ್ಯಾಲೆಸ್ಟೈನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆ (ಯುಎನ್ಆರ್ಡಬ್ಲ್ಯೂಎ) ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ .