ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ. ನಟ ದರ್ಶನ್ ಗೆ ಬೇಲೋ..ಜೈಲೋ..? ಎಂಬ ತೀರ್ಪನ್ನು ಇಂದು ಕೋರ್ಟ್ ಪ್ರಕಟಿಸಲಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದೆ. ಇಂದು ಕೋರ್ಟ್ ಆದೇಶ ಪ್ರಕಟಿಸಲಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ಪ್ರತಿವಾದ ಮಂಡನೆ ಆಲಿಸಿತು. ಬಳಿಕ ದರ್ಶನ್ ಜಾಮೀನು ಆದೇಶವನ್ನು ಅ.14 ಕ್ಕೆ ಕಾಯ್ದಿರಿಸಿತ್ತು.
ಘಟನೆ ಹಿನ್ನೆಲೆ
ಚಿತ್ರದುರ್ಗದ ರೇಣುಕಾಸ್ವಾಮಿ ( ಕೊಲೆಯಾದವ) ಸಾಮಾಜಿಕ ಮಾಧ್ಯಮದಲ್ಲಿ ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು. ಈ ವಿಚಾರಕ್ಕೆ ರೇಣುಕಾಸ್ವಾಮಿಯನ್ನು ದರ್ಶನ್ & ಗ್ಯಾಂಗ್ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಪೊಲೀಸರು ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ದರ್ಶನ್ ಇತರ ಆರೋಪಿಗಳ ಜತೆ ಸೇರಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು. ನಟ ರೇಣುಕಾಸ್ವಾಮಿ ಅವರ ಖಾಸಗಿ ಅಂಗಗಳಿಗೆ ಒದೆಯಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.ಜೂನ್ 8, 2024 ರಂದು ಸುಮನಹಳ್ಳಿ ಸೇತುವೆಯಲ್ಲಿ ರೇಣುಕಾಸ್ವಾಮಿ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.