ಬೆಂಗಳೂರು : ನಟ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಹುನಿರೀಕ್ಷಿತ UI ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಟೀಸರ್ ಮೂಲಕವೇ ಬಹಳ ನಿರೀಕ್ಷೆ ಮೂಡಿಸಿದ್ದ ನಟ ಉಪೇಂದ್ರ ಅಭಿನಯದ ‘ಯುಐ’ ಯುಐ ಚಿತ್ರ ಬಿಡುಗಡೆಗೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ.
ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದ ನಟ ಉಪೇಂದ್ರ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಡಿಸೆಂಬರ್ 20 ಕ್ಕೆ ತಿಂಗಳಿನಲ್ಲಿ ಸಿನಿಮಾ ತೆರೆಗೆ ತರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದು, ಸಿನಿಮಾ ಸಿಕ್ಕಾಪಟ್ಟೆ ಕ್ಯುರಿಯಾಸಿಟಿ ಹುಟ್ಟಿಸಿದೆ.”ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ (Movie) ನಿಮ್ಮನ್ ನೋಡಿ” ಹೀಗೆ ನಟ ಉಪೇಂದ್ರ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ ನಿಮ್ಮನ್ ನೋಡಿ…..
All these days you watched the movies and decided weather it’s a hit or a flop. This movie will watch you and….#UiTheMovieOnDEC20th ❤️🔥#UiTheMovie #UppiDirects #Upendra @nimmaupendra… pic.twitter.com/eSo3tAkKNc
— Upendra (@nimmaupendra) October 14, 2024

