HomeKarnatakaBIG NEWS: ಸಿಎಂ ಸಿದ್ದರಾಮಯ್ಯ ಅವರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

BIG NEWS: ಸಿಎಂ ಸಿದ್ದರಾಮಯ್ಯ ಅವರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆಯನ್ನು ನಡೆಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಮುಡಾ ಹಗರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ, ಭೂಮಾಲೀಕನ ವಿಚಾರಣೆ ನಡೆಸಿದ್ದಾರೆ. ಆದರೆ ಈವರೆಗೂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸಿಲ್ಲ. ಮೊದಲು ಸಿದ್ದರಾಮಯ್ಯ ಅವರ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಇಂದು ಮೈಸೂರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸುವಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರಿಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular