HomeKarnatakaಬೆಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆ ಯತ್ನ

ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆ ಯತ್ನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ವಂಚನೆಗೆ ಯತ್ನಿಸಿದ್ದಾರೆ.

ಫೇಸ್ಬುಕ್ ನಲ್ಲಿ ಆಯುಕ್ತ ದಯಾನಂದ್ ಅವರ ಅಧಿಕೃತ ಖಾತೆ ಇದೆ. ದಯಾನಂದ ಬನ್ನಿಕಲ್ ಐಪಿಎಸ್ ಎಂಬ ಹೆಸರಲ್ಲಿ ಆಯುಕ್ತರ ಫೋಟೋ ಬಳಸಿಕೊಂಡು ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಕೆಲವು ಸ್ನೇಹಿತರಿಗೆ ರಿಕ್ವೆಸ್ಟ್ ಕಳುಹಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಆಯುಕ್ತ ದಯಾಬಂದ್ ಅವರು ನಕಲಿ ಖಾತೆಯನ್ನು ಬ್ಲಾಕ್ ಮಾಡಿಸಿದ್ದಾರೆ. ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಿಡಿಗೇಡಿ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular