
ಬೆಂಗಳೂರು: ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ತಂದ ಹಿನ್ನೆಲೆಯಲ್ಲಿ ಮುಡಾಗೆ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ರಾಜೀನಾಮೆ ನೀಡುವಂತೆ ಮರಿಗೌಡ ಅವರಿಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಮರಿಗೌಡ ರಾಜೀನಾಮೆ ಬಳಿಕ ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆದಿವೆ ಎನ್ನಲಾಗಿದೆ.