HomeKarnatakaBREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

BREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

ಚಿತ್ರದುರ್ಗ: ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳ ದಾಳಿಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 11 ವರ್ಷದ ಬಾಲಕ ಮಿಥುನ್ ಮೃತ ದುರ್ದೈವಿ. ಟ್ಯೂಷನ್ ಕ್ಲಾಸ್ ಗೆ ಹೋಗಿ ಬರುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕನ ತಲೆ, ಕೆನ್ನೆ, ಮೈಯನ್ನು ಕಚ್ಚಿ ಗಾಯಗೊಳಿಸಿವೆ. ಆಟೋ ಚಾಲಕರೊಬ್ಬರು ಬಾಲಕನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular