HomeKarnatakaರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

ಶಿವಮೊಗ್ಗ: ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ.

ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ.

ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular