ಶಿವಮೊಗ್ಗ: ಶಿಕ್ಷಕರೊಬ್ಬರು ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯಲ್ಲಿ ನಡೆದಿದೆ.
ಗಜಾನನ ಹಿರೇಮಠ ಮೃತ ಶಿಕ್ಷಕ. ಚಿತ್ರಕಲಾ ಶಿಕ್ಷಕರಾಗಿದ್ದ ಗಜಾನನ ಹಿರೇಮಠ, ಎಂದಿನಂತೆ ವಿದ್ಯಾರ್ಥಿಗಳಿಗೆ ವಾಲಿಬಾಲ್ ಆಟದ ಬಗ್ಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶಿಕ್ಷಕ ಗಜಾನನ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೆಚ್ಚಿನ ಶಿಕ್ಷಕನ ಅಗಲಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.