HomeKarnatakaBREAKING: ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಸ್ವರೂಪಣಿಯಾಗಿ ದರ್ಶನ ನೀಡಿದ ಕಾವೇರಿ: ತೀರ್ಥೋದ್ಭವಕ್ಕೆ ಭಕ್ತ ಸಾಗರ

BREAKING: ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಸ್ವರೂಪಣಿಯಾಗಿ ದರ್ಶನ ನೀಡಿದ ಕಾವೇರಿ: ತೀರ್ಥೋದ್ಭವಕ್ಕೆ ಭಕ್ತ ಸಾಗರ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದಾಳೆ.

ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಅಪಾರ ಸಂಖ್ಯೆಯ ಭಕ್ತರು ಕಾವೇರಿ ಮಾತೆಗೆ ನಮಿಸಿದ್ದಾರೆ.

ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆಗಳಲ್ಲಿ ಸಂಚಾರದಟ್ಟಣೆ ಉಂಟಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‍ಗಳಲ್ಲಿ ಭಕ್ತಾಧಿಗಳು ಉಚಿತವಾಗಿ ಪ್ರಯಾಣಿಸಲು ವ್ಯವಸ್ಥೆ ಮಾಡಲಾಗಿದೆ. ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಿತು. ಭಕ್ತಾಧಿಗಳ ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆ ನಡೆಯಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾಧಿಗಳು,ಯಾಥ್ರಾರ್ಥಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‍ಗಳ ಬಳಕೆ ಮಾಡದಂತೆ ಸೂಚಿಸಲಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular