ಬೆಂಗಳೂರು : 2026 ರಲ್ಲಿ ಮಂಗನ ಕಾಯಿಲೆಗೆ ಲಸಿಕೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗನ ಕಾಯಿಲೆ (ಕೆಎಫ್ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ. ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.