HomeKarnatakaBIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರು ಸ್ಥಳದಲ್ಲೇ ಸಾವು

BIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತ ಯುವಕರ ಗುರುತು ಪತ್ತೆಯಾಗಿಲ್ಲ. ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಇಬ್ಬರು ಯುವಕರು ಹೆಬ್ಬಾಳದತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಮೃತ ಓರ್ವ ಯುವಕನ ಸೊಂಟದಲ್ಲಿ ಚಾಕು ಪತ್ತೆಯಾಗಿದ್ದು, ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಯುವಕರು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular