ಬಳ್ಳಾರಿ: ನಾನು ಯಾವುದೇ ತಪ್ಪು ಮಾಡಿಲ್ಲ, ಇದೆಲ್ಲ ಸುಳ್ಳು ಆರೋಪ ಎಂದು ಮಾಜಿ ಸಚಿವ ಬಿ. ನಾಗೇಂದ್ರ ಕಣ್ಣೀರಿಟ್ಟಿದ್ದಾರೆ.
ಬಳ್ಳಾರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ದೋಷ ಇಲ್ಲದೆ ನಾನು ಹೊರ ಬರುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ.
ಪರಪ್ಪನ ಅಗ್ರಹಾರದ ಜೈಲಿನ ಗೋಡೆಯ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲಾಗುತ್ತಾರೆ ನೋಡ್ತಾ ಇರಿ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಾನು ಅಕ್ರಮ ಮಾಡಿದ್ದೇನೆ ಎಂದು ನಂಬಿದ್ದಾರೆ. ನಾನು ಯಾರನ್ನು ನಂಬಿಸಬೇಕಿಲ್ಲ. ಈ ಸುಳ್ಳಿನ ಪ್ರಪಂಚದಲ್ಲಿ ಕೆಟ್ಟ ಕೆಲಸಕ್ಕೆ ಮುಂದಾಗಿದ್ದಾರೆ. ನಾನು ಹಲವಾರು ಬಾರಿ ಜೈಲು ನೋಡಿದ್ದೇನೆ. ನಿಮ್ಮ ನಾಯಕರು ಇಂತಹ ಜೈಲಿಗೆ ಹೆದರಿ ಬೀಳಲ್ಲ ನಾನು ಎಂದು ನಾಗೇಂದ್ರ ಹೇಳಿದ್ದಾರೆ.