ಎನ್ಐಇಎಲ್ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.in/ ಆನ್ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.
ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜಾನಿಕ ಸಂಸ್ಥೆಯಾದ ರಾಷ್ಠ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್.ಇ ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರಿನಲ್ಲಿ ಅಕ್ಟೋಬರ್ 20, ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲಾ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ರವೀಂದ್ರ ಪಿ ದ್ಯಾಬೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.