alex Certify ‘ಗ್ಯಾರಂಟಿ’ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿಗೆ ಮಹಿಳೆಯರೇ ತಕ್ಕ ಉತ್ತರ ನೀಡಬೇಕು : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗ್ಯಾರಂಟಿ’ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿಗೆ ಮಹಿಳೆಯರೇ ತಕ್ಕ ಉತ್ತರ ನೀಡಬೇಕು : CM ಸಿದ್ದರಾಮಯ್ಯ

ಬೆಂಗಳೂರು : ‘ಗ್ಯಾರಂಟಿ’ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿಗೆ ಮಹಿಳೆಯರೇ ತಕ್ಕ ಉತ್ತರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸೌಮ್ಯ ರೆಡ್ಡಿಯವರ ಪದಗ್ರಹಣ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನೂ ವಿರೋಧಿಸುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ಮಹಿಳೆಯರೇ ನೀಡಬೇಕು. ಸಂವಿಧಾನ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಬಿಜೆಪಿಯವರ ಗುರೂಜಿ ಸಾವರ್ಕರ್ ಸಂವಿಧಾನ ವಿರೋಧಿಸಿದ್ದರು. ಈ ಇತಿಹಾಸವನ್ನು ಮಹಿಳಾ ಕಾಂಗ್ರೆಸ್ ಘಟಕ ರಾಜ್ಯದ ಮಹಿಳೆಯರು, ಯುವತಿಯರಿಗೆ ಸರಿಯಾಗಿ ಮನದಟ್ಟು ಮಾಡಿಸಬೇಕು.

ಬಿಜೆಪಿ ಪಕ್ಷ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕೃತಿಯ ವಿರೋಧಿ. ಮುಖ್ಯವಾಗಿ ಬಿಜೆಪಿಯು ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು. ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ. ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು. ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ ಎಂದರು.

2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಬೇಕು. ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆಯರನ್ನು ಸಜ್ಜುಗೊಳಿಸಿ, ಪಕ್ಷ ಸಂಘಟನೆ ಮಾಡುವ ಸಾಮರ್ಥ್ಯ ಸೌಮ್ಯರೆಡ್ಡಿಯವರಿಗೆ ಇದ್ದು, ಈ ದಿಕ್ಕಿನಲ್ಲಿ ಅವರು ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...