ಬೆಂಗಳೂರು : ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಮಾ.4 ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೀಸಲಿಟ್ಟ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಿಸಲಾಗುವುದು.