HomeKarnatakaBREAKING : 'ಬಿಲ್ಲವ' ಸಮುದಾಯದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ : ಅರಣ್ಯಾಧಿಕಾರಿ ಅರೆಸ್ಟ್..!

BREAKING : ‘ಬಿಲ್ಲವ’ ಸಮುದಾಯದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ : ಅರಣ್ಯಾಧಿಕಾರಿ ಅರೆಸ್ಟ್..!

ಮಂಗಳೂರು : ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಅರಣ್ಯಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.ಸುಳ್ಯದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಲ್ಲವ ಸಮಾಜದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಹೇಳಿಕೆ ನೀಡಿದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ಅವರು ನೀಡಿದ ದೂರಿನ ಅನ್ವಯ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ಸುರೇಶ್ ಕಾಸರಗೋಡು ಜೊತೆ ದೂರವಾಣಿಯಲ್ಲಿ ಮಾತನಾಡುತ್ತ ಸಂಜೀವ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮುದಾಯಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಿದ್ದಾರೆ. ಇದಕ್ಕೆ ನನ್ನ ಬಳಿ 10 ಸಾವಿರ ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹೆಣ್ಣುಮಕ್ಕಳನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅವಹೇಳನಕಾರಿಯಾಗಿ ನಾಲಿಗೆ ಹರಿಬಿಟ್ಟಿದ್ದನು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಜೀವ ಪೂಜಾರಿ ಅವರ ಆಡಿಯೋ ವೈರಲ್ ಆಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹಿಂದೂ ಜಾಗರಣಾ ವೇದಿಕೆ ಕರೆ ನೀಡಿತ್ತು, ಈ ಬೆನ್ನಲ್ಲೇ ಎಫ್ಐಆರ್ ದಾಖಲಿಸಲಾಗಿತ್ತು, ಇದೀಗ ಅರಣ್ಯಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular