alex Certify ಎತ್ತುಗಳ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎತ್ತುಗಳ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬೈರೆಕೊಪ್ಪ ಗ್ರಾಮದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

21 ವರ್ಷದ ಮಿಥುನ್ ಆರ್. ಪಾಟೀಲ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮಿಥುನ್ ಸೊರಬ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಓದುತ್ತಿದ್ದು, ಗ್ರಾಮದ ಸಮೀಪದ ಕೆರೆಯಲ್ಲಿ ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಜಾರಿ ನೀರಿಗೆ ಬಿದ್ದಿದ್ದಾರೆ. ಮೇಲೆ ಬರಲಾರದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೊರಬ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...