HomeKarnatakaGOOD NEWS: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಗುಂಪು ವಿಮಾ ಮೊತ್ತ 50 ಲಕ್ಷ...

GOOD NEWS: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಗುಂಪು ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ, ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತರ ಕುಟುಂಬಕ್ಕೆ ನೀಡಲಾಗುವ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗೆ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆದೇಶಿಸಿದ್ದಾರೆ.

ಪೊಲೀಸ್ ಇಲಾಖೆಯ ಫಾಲೋವರ್, ಪೇದೆ, ಮುಖ್ಯಪೇದೆ. ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್. ಸಬ್ ಇನ್ಸ್ಪೆಕ್ಟರ್. ಪೊಲೀಸ್ ಇನ್ಸ್ಪೆಕ್ಟರ್. ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಅಧೀಕ್ಷಕರು, ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಡೈರೆಕ್ಟರ್ ಜನರಲ್ ಅಂಡ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಯವರೆಗೆ ಅಧಿಕಾರಿಗಳು, ಸಿಬ್ಬಂದಿ ಆಕಸ್ಮಿಕ, ಅಪಘಾತದಲ್ಲಿ ಮೃತಪಟ್ಟಲ್ಲಿ ಕುಟುಂಬಕ್ಕೆ ನೀಡಲಾಗುವ ಗುಂಪು ವಿಮೆ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular