ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಇಂದು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ವಿಚಾರಿಸಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಕಳೆದ ಏಪ್ರಿಲ್ 29ರಂದು ಎಸ್.ಎಂ.ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ತಿಂಗಳ ಕಾಲ ಸುದೀರ್ಘ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.