ಬೆಂಗಳೂರು : ಅಮ್ಮ ಬೈದಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.
ಶ್ರಾವ್ಯ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಮ್ಮ ಬೈದಳು ಎಂಬ ಕ್ಷುಲ್ಲಕ ಕಾರಣಕ್ಕೆ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಬಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಕ್ಕಳು ಆತ್ಮಹತ್ಯೆ ನಿರ್ಧಾರಕ್ಕೆ ಬರುವುದು ನಿಜಕ್ಕೂ ಆತಂಕಕಾರಿಯಾಗಿದೆ.