alex Certify BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಸತತ ಎರಡನೇ ದಿನವಾದ ಇಂದು ಕೂಡ ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಶುಕ್ರವಾರ ರಾತ್ರಿ 10ಗಂಟೆಯವರೆಗೂ ದಾಖಲೆಗಳನ್ನು ಪರಿಶೀಲಿಸಿ ಹೊರಟಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 10ಗಂಟೆಗೆ ಮತ್ತೆ ಮುಡಾ ಕಚೇರಿಗೆ ಆಗಮಿಸಿ ಪರಿಶೀಲನೆ ಮುಂದುವರೆಸಿದ್ದಾರೆ. ಇಡಿ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.

ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಹಿನ್ನೆಲೆಯಲ್ಲಿ ದೈನಂದಿನ ಕಾರ್ಯಚಟುವಟಿಕೆಗಳು ನಡೆಯುತ್ತಿಲ್ಲ. ಸಾರ್ವಜನಿಕರಿಗೆ ಮುಡಾ ಕಚೇರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...