ಕಲಬುರಗಿ: ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸುನೀಲ್ ವಲ್ಯಾಪುರ ನಿವಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿರುವ ಸುನೀಲ್ ವಲ್ಯಾಪುರ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಸುನೀಲ್ ವಲ್ಯಾಪುರ ಪುತ್ರ ವಿನಯ್ ವಿರುದ್ಧ ಆರೋಪ ಕೇಳಿಬಂದಿತ್ತು. 2022ರಲ್ಲಿ ನಿಗಮದ 12 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರನದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು, ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ.