HomeKarnatakaBREAKING: ಮುಳುಗಡೆ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್

BREAKING: ಮುಳುಗಡೆ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷ್ಮವಾಗಿದ್ದು, ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ. ರೈತರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಲ್ಲ. ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. 2015 ರೊಳಗೆ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡುವುದು, ತೊಂದರೆ ನೀಡದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಎಲ್ಲ ರೀತಿಯ ಭೂ ಕಬಳಿಕೆ ಪ್ರಕರಣ ನಿರ್ವಹಿಸಲು ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಅರಣ್ಯ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.

ತುಂಗಾ ನದಿಗೆ ಕಲುಷಿತ ನೀರು ಹೋಗದಂತೆ ಕ್ರಮ ವಹಿಸಲು ಸಮಿತಿ ರಚಿಸಲಾಗುವುದು. ನದಿ ಈಗಾಗಲೇ ಸಾಕಷ್ಟು ಕಲುಷಿತವಾಗಿದೆ. ಮುಂದೆ ಆಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಕೆಟ್ಟ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ನದಿ ಸಂರಕ್ಷಣೆಗೆ ಶಾಶ್ವತ ಪರಿಹಾರದ ಕುರಿತು ಪಕ್ಷಾತೀತವಾಗಿ ಯೋಚಿಸಲಾಗುತ್ತಿದೆ. ಬೃಹತ್ ನೀರಾವರಿ ಮತ್ತು ಪಾಲಿಕೆ ಅಧಿಕಾರಿಗಳು ಈ ಕುರಿತು ಸಭೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular