alex Certify ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಮೂವರು ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ.

ನಿನ್ನೆ ಸಂಜೆ 4:30ಕ್ಕೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ ಪಾಳ್ಯದ ಮೂವರು ಹೆಣ್ಣು ಮಕ್ಕಳು ಕಾಣೆಯಾಗಿದ್ದರು. ಹರ್ಷಿತಾ(3), ನಿಶ್ವಿಕಾ(6), ರಶ್ಮಿಕಾ(10) ನಾಪತ್ತೆಯಾಗಿದ್ದ ಮಕ್ಕಳು. ಮನೆಯಿಂದ ಹೊರಗೆ ಬಂದು ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಆತಂಕಗೊಂಡ ಪೋಷಕರು ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.

ನಂತರ ಹುಡುಕಾಟದ ವೇಳೆ ಮರಿಯಪ್ಪನಪಾಳ್ಯದ ಬೇರೆ ರಸ್ತೆಯಲ್ಲಿ ಮಕ್ಕಳು ಪತ್ತೆಯಾಗಿದ್ದಾರೆ. ಮಕ್ಕಳು ಮನೆಯ ದಾರಿ ಮರೆತು ಬೇರೆ ರಸ್ತೆಗೆ ಹೋಗಿದ್ದು, ವಾಪಸ್ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಹೀಗೆ ಮಕ್ಕಳು ಮನೆಗೆ ಮರಳಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...