alex Certify ರಾಜ್ಯದ ವಿವಿಧೆಡೆ ಮಳೆ ಅಬ್ಬರ: ಇನ್ನೂ 3-4 ದಿನ ಭಾರಿ ಮಳೆ ಮುನ್ಸೂಚನೆ: ಅ. 22ರವರೆಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿವಿಧೆಡೆ ಮಳೆ ಅಬ್ಬರ: ಇನ್ನೂ 3-4 ದಿನ ಭಾರಿ ಮಳೆ ಮುನ್ಸೂಚನೆ: ಅ. 22ರವರೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರೆದಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾದ ವರದಿಯಾಗಿದೆ.

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು -ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಹಲವು ಕಡೆ ಅಕ್ಟೋಬರ್ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಶಿವಮೊಗ್ಗ, ತುಮಕೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಅಕ್ಟೋಬರ್ 22ರ ವರೆಗೆ ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...