HomeKarnatakaBREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ...

BREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ ಸಂಗ್ರಹ

ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ.

ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ ಸಮೇತ ಬೆಂಗಳೂರಿಗೆ ತೆರಳಿದ್ದಾರೆ. ಎರಡು ಬಾಕ್ಸ್ ಗಳಲ್ಲಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ನಿವೇಶನ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಹಾರ್ಡ್ ಡಿಸ್ಕ್ ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪತ್ರದ ಮೂಲ ಪ್ರತಿಯನ್ನು ಕೂಡ ಮುಡಾದಿಂದ ವಶಪಡಿಸಿಕೊಂಡಿದ್ದಾರೆ. ತಾಲೂಕು ಕಚೇರಿಯಿಂದಲೂ ಅನೇಕ ದಾಖಲೆ ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular