HomeKarnatakaಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಚೆನ್ನೈನಿಂದ ಬರುವ ಫ್ಲೈಟ್ ನಲ್ಲಿ ಬಾಂಬ್ ಇದೆ ಎಂದು...

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಚೆನ್ನೈನಿಂದ ಬರುವ ಫ್ಲೈಟ್ ನಲ್ಲಿ ಬಾಂಬ್ ಇದೆ ಎಂದು ಸಂದೇಶ ರವಾನೆ

ಬೆಳಗಾವಿ: ಕೆಲದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಈ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶದ ಇ-ಮೇಲ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

ಚೆನ್ನೈನಿಂದ ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗಾವಿ ಏರ್ ಪೋರ್ಟ್ ಅಥಾರಿಟಿಗೆ ಇ-ಮೇಲ್ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಚೆನ್ನೈ ನಿಂದ ಬೆಳಗಾವಿಗೆ ಬರುವ ವಿಮಾನ ಸಂಪರ್ಕ ಕಡಿತಗೊಳಿಸಲಾಗಿದೆ.

ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕುರಿತು ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular