HomeIndiaಇಲ್ಲಿದೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಬಗ್ಗೆ ಮಾಹಿತಿ

ಇಲ್ಲಿದೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಬಗ್ಗೆ ಮಾಹಿತಿ

ಕೇರಳದ ವಯನಾಡ್ ಉಪಚುನಾವಣೆಯಲ್ಲಿ ನವ್ಯಾ ಹರಿದಾಸ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

ಅವರು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ನಿಗದಿಯಾಗಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಯನಾಡ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

39 ವರ್ಷದ ನವ್ಯಾ ಹರಿದಾಸ್ ಅವರು ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು ಬಾರಿ ಕೌನ್ಸಿಲರ್ ಆಗಿದ್ದಾರೆ. ಮತ್ತು ಪ್ರಸ್ತುತ ಕೇರಳದ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿದಾಸ್ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ-ಟೆಕ್ ಪದವಿ ಪಡೆದಿದ್ದಾರೆ. ಅವರು 2021 ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕೋಝಿಕ್ಕೋಡ್ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಪ್ರಕಾರ ನವ್ಯಾ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ.

ಕೇರಳದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಯುಡಿಎಫ್) ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅಕ್ಟೋಬರ್ 23 ರಂದು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಲು ಸಿಪಿಐ ಹಿರಿಯ ನಾಯಕ ಸತ್ಯನ್ ಮೊಕೇರಿ ಅವರನ್ನು ಕಣಕ್ಕಿಳಿಸಿದೆ.

ಉಪಚುನಾವಣೆಯ ಮತದಾನ ನವೆಂಬರ್ 13 ರಂದು ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ(ಇಸಿಐ) ಪ್ರಕಟಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular