ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲನ್ನು ಅ. 24ರಂದು ತೆರೆಯಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಅ. 24ರಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ ಎಂದು ಅವರು ಹೇಳಿದ್ದಾರೆ.
11 ದಿನ ಹಾಸನಾಂಬ ದೇವಿಯ ದರ್ಶನ ಇರಲಿದೆ. ಮೊದಲ ಮತ್ತು ಕೊನೆಯ ದಿನಗಳಂದು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಈ ಬಾರಿ ಸಾವಿರ ರೂಪಾಯಿ ಮತ್ತು 300 ರೂ. ಟಿಕೆಟ್ ಪಡೆದವರಿಗೆ ಒಂದೊಂದು ಲಾಡು ವಿತರಿಸಲಾಗುವುದು. ಸಾರ್ವಜನಿಕರಿಗೆ ಉಚಿತವಾಗಿ ಪ್ರಸಾದ ವಿತರಿಸಲಾಗುತ್ತದೆ.ಹಾಸನಾಂಬ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲೆಯ ಪ್ರವಾಸಿ ತಾಣ ಹಾಗೂ ಪ್ರಸಿದ್ಧ ದೇಗುಲಗಳಿಗೆ ಬೆಳಗ್ಗೆ ತೆರಳಿ ಸಂಜೆ ವಾಪಸ್ ಕರೆತರಲು ಕೆಎಸ್‌ಆರ್‌ಟಿಸಿ ವತಿಯಿಂದ ‘ಪ್ಯಾಕೇಜ್ ಟೂರ್” ವ್ಯವಸ್ಥೆ ಕಲ್ಪಿಸಲಾಗುತ್ತಿದೆ.