HomeKarnatakaರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ 5 ದಿನ ಹೆಚ್ಚಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 23ರವರೆಗೆ ಭಾರಿ ಮಳೆ ಮುಂದುವರೆಯಲಿದ್ದು, ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ 17.7 ಮಿ.ಮಿ ಮಳೆಯಾಗಿದೆ. ಹೆಚ್ ಎ ಎಲ್ ನಲ್ಲಿ 10.8 ಮಿ.ಮೀ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಶಿವಮೊಗ್ಗ, ಚಿಕ್ಕಮಗಳೂರು,ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular