HomeKarnatakaಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಸಲಹೆಗಾರರು 1 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 2 ಹುದ್ದೆ ವಿದ್ಯಾರ್ಹತೆ ಬಿ.ಎಸ್.ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಪ್ರಾಶಸ್ತ್ಯ ಕೊಡಲಾಗುವುದು.

ಈ ನೇಮಕಾತಿಯು ದಿ: 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಿವರಿಸಿರುವ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ/ಪ.ಪಂ/ಪ್ರವರ್ಗ-1 40 ವರ್ಷಗಳು.

ಆಸಕ್ತರು ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಚೇರಿ ಓಟಿ ರಸ್ತೆ, ಶಿವಮೊಗ್ಗ ಇಲ್ಲಿಂದ ಅರ್ಜಿಯನ್ನು ಪಡೆದು ನ.05 ರೊಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರಿಗೆ ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular